ಉಡುಪಿ: ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ; ಎಸ್‌ಪಿ ಹರಿರಾಂ ಶಂಕರ್ ಎಚ್ಚರಿಕೆ
ಅಲೆವೂರು ಮತ್ತು ಬೆಳ್ಳೆ ಭಾಗದಲ್ಲಿ ಮಕ್ಕಳ ಕಳ್ಳರು ಅಲೆದಾಡುತ್ತಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ವದಂತಿಗಳನ್ನು ಉಡುಪಿ ಎಸ್‌ಪಿ ಹರಿರಾಂ ಶಂಕರ್ ಅಲ್ಲಗಳೆದಿದ್ದಾರೆ. ಸುಳ್ಳು ಸುದ್ದಿ ಹರಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಅವರು ತಿಳಿಸಿದ್ದಾರೆ.

