ಉಡುಪಿ, ಆಗಸ್ಟ್ 23, 2025: ಉಡುಪಿ ಜಿಲ್ಲಾ ವಕ್ಫ್ ಬೋರ್ಡ್‌ನ ಚೆಯರ್‌ಮನ್ ಹುದ್ದೆಗೆ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ನ ಹಲವು ಮುಸ್ಲಿಂ ನಾಯಕರು ತೀವ್ರ ಪೈಪೋಟಿಯಲ್ಲಿದ್ದಾರೆ. ಈ ಕುರಿತು ರಾಜಕೀಯ ಕಸರತ್ತುಗಳು ಜೋರಾಗಿ ನಡೆಯುತ್ತಿವೆ.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಈ ವಿಷಯದ ಬಗ್ಗೆ ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವರ ಅನುಮೋದನೆಯೊಂದಿಗೆ, ಜಿಲ್ಲಾ ಕಾಂಗ್ರೆಸ್ ನಾಯಕರು ಒಟ್ಟಾಗಿ ಕುಳಿತು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವೆವು. ಈಗಾಗಲೇ ಈ ಕುರಿತು ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಅವರೊಂದಿಗೆ ಚರ್ಚಿಸಿದ್ದೇನೆ. ಕಾಂಗ್ರೆಸ್ ಶಾಸಕ ಅಭ್ಯರ್ಥಿಗಳು ಮತ್ತು ಜಿಲ್ಲಾ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ,” ಎಂದು ತಿಳಿಸಿದರು. ಕಾಂಗ್ರೆಸ್ ಹೊರತು ಪಡಿಸಿ ಬೇರೆಯವರಿಗೆ ಈ ಹುದ್ದೆ ನೀಡುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.