ಉಡುಪಿ, ಸೆಪ್ಟಂಬರ್ 11, 2025 : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಇಂಡಸ್ಟ್ರಿ ಲಿಂಕೇಜ್ ಸೆಲ್ ಅಡಿ ಕೌಶಲ್ಯ ತರಬೇತಿ ಆಯೋಜಿಸಲಾಗಿದ್ದು, ನೇರ ನಗದು ವರ್ಗಾವಣೆ ಮೂಲಕ ನಿರಂತರವಾಗಿ ಆರು ತಿಂಗಳು ನಿರುದ್ಯೋಗ ಭತ್ಯೆ ಪಡೆದಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು https://www.kaushalkar.com/ ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ ಹಾಗೂ ಯುವತಿಯರು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಬರುವ ಸರ್ಕಾರಿ ತರಬೇತಿ ಸಂಸ್ಥೆಗಳಾದ ಐ.ಟಿ.ಐ, ಜಿ.ಟಿ.ಟಿ.ಸಿ, ಕೆ.ಜಿ.ಟಿ.ಟಿ.ಐ ಹಾಗೂ ಸಿಡ್ಹಾಕ್ ಮೂಲಕ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಖಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574204 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.