ಉಡುಪಿ: ಸರಕಾರಿ ಕಚೇರಿಗೆ ಉಪಲೋಕಾಯುಕ್ತರ ಭೇಟಿ- ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಲು ಸೂಚನೆ
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಉಡುಪಿಯ ಎಸ್‌ಟಿಪಿ ಘಟಕ, ಬಸ್ ನಿಲ್ದಾಣ, ತಾಲೂಕು ಕಚೇರಿ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕೆಂಡಾಮಂಡಲವಾದ ಅವರು, ಹಲವು ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದರು.

