ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡಿ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್ ಸರ್ಕಾರ: ಯಶ್‌ಪಾಲ್ ಸುವರ್ಣ ಆಕ್ರೋಶ

ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ನೀಡಿ ಮತದಾರರ ಪಟ್ಟಿಯಲ್ಲಿ ಉಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ದೇಶದ ಆಂತರಿಕ ಭದ್ರತೆಗೆ ಆಪತ್ತು ತರಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆರೋಪಿಸಿದ್ದಾರೆ.